Home Uncategorized ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

18
0

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರ ಕೆಲಸಗಳಿಗೆ ತಮ್ಮ ಶಿಕ್ಷಕರನ್ನು ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ. ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರ ಕೆಲಸಗಳಿಗೆ ತಮ್ಮ ಶಿಕ್ಷಕರನ್ನು ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತರಿಗೆ (ಚುನಾವಣೆ) ಪತ್ರ ಬರೆದಿದುವರ ಆಯುಕ್ತರು, ಈ ಹಿಂದೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ, ಶಿಕ್ಷಕರ ನಿಯೋಜನೆಯನ್ನು ಅಂತಹ ಕೆಲಸಕ್ಕೆ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

‘ಸಾರ್ವಜನಿಕ ರಜಾದಿನಗಳು, ದಸರಾ ಮತ್ತು ಬೇಸಿಗೆ ರಜೆಯನ್ನು ಪರಿಗಣಿಸಿ ನಾವು 244 ಕೆಲಸದ ದಿನಗಳನ್ನು ನಿಗದಿಪಡಿಸಿದ್ದೇವೆ. ಪಠ್ಯೇತರ ಚಟುವಟಿಕೆಗಳು, ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕಾರ್ಯಗಳನ್ನು ನಡೆಸಲು 64 ದಿನಗಳನ್ನು ಮೀಸಲಿಡಲಾಗಿದೆ. ಆದರೆ, ಅವರನ್ನು ಚುನಾವಣಾ ಸಂಬಂಧಿತ ಕೆಲಸಕ್ಕೆ ನಿಯೋಜಿಸುವುದರಿಂದ ವೇಳಾಪಟ್ಟಿಗೆ ತೊಂದರೆ ಮತ್ತು ಪರಿಣಾಮ ಬೀರುತ್ತದೆ’ ಎಂದಿದ್ದಾರೆ. 

ಬೋಧನಾ ಗುಣಮಟ್ಟದ ಮೇಲೂ ಪರಿಣಾಮ ಬೀರುವುದರಿಂದ ಶಿಕ್ಷಕರನ್ನು ಅಂತಹ ಕೆಲಸಗಳಿಗೆ ನಿಯೋಜಿಸಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here