Home ಕರ್ನಾಟಕ ಚುನಾವಣೆಗೆ ಅರೆಸೇನಾ ಪಡೆ ನಿಯೋಜಿಸಲು ಕುಮಾರಸ್ವಾಮಿ ಆಗ್ರಹ

ಚುನಾವಣೆಗೆ ಅರೆಸೇನಾ ಪಡೆ ನಿಯೋಜಿಸಲು ಕುಮಾರಸ್ವಾಮಿ ಆಗ್ರಹ

29
0

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಜತೆಗೆ, ಅರೆಸೇನಾ ಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿಗಳನ್ನು ನಿಯೋಜಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಒತ್ತಾಯಿಸಿದರು.

ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯೇ. ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ರವಿವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್ ಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೊ ದಾಖಲೆ ನನ್ನಲ್ಲಿ ಇದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here