ಚಿಕ್ಕಮಗಳೂರು:
ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಕಾಫಿ ಡೇಯ ದಿವಂಗತ ಸಿದ್ದಾರ್ಥ್ ಹೆಗ್ಡೆ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪುತ್ರಿ ಮಾಳವಿಕಾ ಅವರಿಗೆ ಜಾಮೀನು ದೊರೆತಿದೆ.
ಕೋರ್ಟ್ ಗೆ ಇಂದು ಹಾಜರಾದ ಮಾಳವಿಕ ಅವರಿಗೆ ಜಾಮೀನು ನೀಡಲಾಗಿದೆ.
ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.
ಬಂಧನ ವಾರಂಟ್ ಹೊರಡಿಸಿದ್ದ ಬೆನ್ನಲ್ಲೇ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು.