Home Uncategorized ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

45
0

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. 

ಇದನ್ನು ಓದಿ: ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಬಲಿ; ಶಾಸಕ ಎಂ.ಪಿ ಕುಮಾರಸ್ವಾಮಿಗೆ ಹಿಗ್ಗಾ-ಮುಗ್ಗಾ ಥಳಿಸಿದ ಗ್ರಾಮಸ್ಥರು!

ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ  ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.

ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

LEAVE A REPLY

Please enter your comment!
Please enter your name here