Home Uncategorized ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ ಭಾರೀ ದಂಡ ವಿಧಿಸಿದ ನ್ಯಾಯಾಲಯ

ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ ಭಾರೀ ದಂಡ ವಿಧಿಸಿದ ನ್ಯಾಯಾಲಯ

16
0

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ.

ಮಧು ಬಂಗಾರಪ್ಪ ಅವರು 2011 ರಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಎಕ್ಸ್​ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್  6 ಕೋಟಿ 96 ಲಕ್ಷದ 6 0 ಸಾವಿರ ರೂ. ದಂಡವನ್ನು ದೂರುದಾರ ಕಂಪೆನಿಗೆ ಮತ್ತು 10 ಸಾವಿರ ರೂ. ದಂಡವನ್ನು ಸರಕಾರಕ್ಕೆ ತೆರಬೇಕು ಎಂದು ತೀರ್ಪು ನೀಡಿದ್ದಾರೆ.

LEAVE A REPLY

Please enter your comment!
Please enter your name here