Home Uncategorized ಚೋಟಾ ಪಾಕಿಸ್ತಾನ ವಿಡಿಯೋ ವೈರಲ್: ಕ್ರಮ ಕೈಗೊಳ್ಳುವಂತೆ ಮೈಸೂರು ಎಸ್ ಪಿಗೆ ಸಿಎಂ ಬೊಮ್ಮಾಯಿ ಸೂಚನೆ

ಚೋಟಾ ಪಾಕಿಸ್ತಾನ ವಿಡಿಯೋ ವೈರಲ್: ಕ್ರಮ ಕೈಗೊಳ್ಳುವಂತೆ ಮೈಸೂರು ಎಸ್ ಪಿಗೆ ಸಿಎಂ ಬೊಮ್ಮಾಯಿ ಸೂಚನೆ

7
0
Advertisement
bengaluru

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು ಚೋಟಾ ಪಾಕಿಸ್ತಾನ ಎಂದು ಬಣ್ಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು ಚೋಟಾ ಪಾಕಿಸ್ತಾನ ಎಂದು ಬಣ್ಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಕಳೆದ ಮಂಗಳವಾರ ರಂಜಾನ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಮುಗಿಸಿ ಹೊರ ಬರುವ ವೇಳೆ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂಬ ಆಡಿಯೋ ಹೊಂದಿರುವ ವಿಡಿಯೋ ರೆಕಾರ್ಡ್‍ವೊಂದು ಇದೀಗ ವೈರಲ್ ಆಗಿದೆ.

ಇದನ್ನು ಓದಿ: ಕಾಂಗ್ರೆಸ್ ನಾಯಕರು ಸಚಿವ ಅಶ್ವಥ್ ನಾರಾಯಣ ವಿರುದ್ಧ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ, ಅವರ ಆರೋಪಕ್ಕೆ ಕಿಂಚಿತ್ತು ಬೆಲೆ ಇಲ್ಲ: ಸಿಎಂ ಬೊಮ್ಮಾಯಿ

ಈ ವಿಡಿಯೋದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರ ಎಲ್ಲರೂ ಒಂದೆಡೆ ಸೇರಿದ್ದರು. ಎಲ್ಲರೂ ರಸ್ತೆ ಬದಿಯಲ್ಲಿ ನಿಂತಿದ್ದು, ಅವರು “ನಾರಾ ಇ ತಕ್ಬೀರ್ ಅಲ್ಲಾಹು ಅಕ್ಬರ್” ಎಂದು ಕೂಗುವುದನ್ನು ಕೇಳಬಹುದು. ಈ ವೇಳೆ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದು, ದೃಶ್ಯ ಸೆರೆ ಹಿಡಿಯುವಾಗ ಆ ವ್ಯಕ್ತಿ ಕೌಲಂದೆ ಗ್ರಾಮ ಚೋಟಾ ಪಾಕಿಸ್ತಾನ ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

bengaluru bengaluru

ಇಂದು ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೈಸೂರು ಎಸ್‌ಪಿಗೆ ಸೂಚಿಸುತ್ತೇನೆ ಎಂದು ಬೊಮ್ಮಾಯಿ ವರದಿಗಾರರಿಗೆ ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here