ಬೆಂಗಳೂರು:
ತಾನು ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಅಣ್ಣನ ಮಗಳೆಂದು ಹೇಳಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದ ಮಹಿಳೆಯನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನ ಗಂಗಾ ಲೇಔಟ್ ನಿವಾಸಿ ಪಲ್ಲವಿ (32) ಬಂಧಿತ ಆರೋಪಿತೆ.
ವಿದ್ಯಾವಂತ, ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಳ್ಳುತ್ತಿದ್ದ ಆರೋಪಿತೆ, ಸ್ವಯಂ ಉದ್ಯೋಗಕ್ಕೆ ಬ್ಯಾಂಕಿನಿಂದ ಸಾಲ ಕೊಡಿಸುವುದಾಗಿ ನಂಬಿಸಿ, ನಂತರ ಹಣ ಪಡೆದು 10ಕ್ಕೂ ಹೆಚ್ಚು ಜನರಿಗೆ ಸಾಲಕೊಡಿಸದೇ ವಂಚಿಸಿದ್ದಾಳೆ ಎಂಬ ಆರೋಪಿಸಲಾಗಿದೆ.