Home Uncategorized ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಲಕ್ಷ್ಮಿ ಹೆಬ್ಬಾಳ್ಕರ್

ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಲಕ್ಷ್ಮಿ ಹೆಬ್ಬಾಳ್ಕರ್

13
0

ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ. ಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ‘ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ಈಗ ದೇವಿಯನ್ನ ಬೇಡಿದ್ದೇನೆ. ಕಾಂಗ್ರೆಸ್ ಪಕ್ಷ‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ದೇವಾಲಯಗಳಲ್ಲಿ ಫುಲ್ ರಶ್, ಪ್ರವಾಸೋದ್ಯಮಕ್ಕೆ ಉತ್ತೇಜನ

ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್​ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ. ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅವರಿಗೆ ಆ್ಯಪ್ ತೋರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 17 ರ ನಂತರದಿಂದ ಫಲನಾಭವಿಗಳ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು‌‌‌ ಸಚಿವರು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ- ಜಗದೀಶ್ ಶೆಟ್ಟರ್ ವಾಗ್ದಾಳಿ

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಅವರು ಸ್ಪಷ್ಟಪಡಿಸಿದರು.
 

LEAVE A REPLY

Please enter your comment!
Please enter your name here