Home ಕರ್ನಾಟಕ ಜೂ. 29ರಂದು ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ

ಜೂ. 29ರಂದು ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ

20
0

ಮಂಗಳೂರು, ಜೂ.27: ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ ಹಾಗೂ ಪ್ರೊ.ಬಿ ಕೃಷ್ಣಪ್ಪನವರ 86ರ ಜನುಮ ದಿನದ ಅಂಗವಾಗಿ ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ ಜೂ.29ರಂದು ಹಾಸನದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ರಾಜ್ಯ ಸಂಘಟನಾ ಸಂಚಾಲಕ ಎಂ.ದೇವದಾಸ್ ಹೇಳಿದರು.

ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ‌್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹಾದೇವಪ್ಪ, ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಪ್ರೊ. ಕೃಷ್ಣಪ್ಪ ಟ್ರಸ್ಟ್‌ನ ಇಂದಿರಾ ಕೃಷ್ಣಪ್ಪ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕರಾದ ಎಂ. ಸೋಮಶೇಖರ್ ಹಾಸನ ವಹಿಸಲಿದ್ದಾರೆ. ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಈ ಸಂದರ್ಭ ಜಿಲ್ಲಾ ಸಂಚಾಲಕ ರಘು ಕೆ ಎಕ್ಕಾರ್, ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಸಂಘಟನಾ ಸಂಚಾಲಕರಾದ ಕಮಲಾಕ್ಷ ಬಜಾಲ್, ರಾಜಯ್ಯ, ಸದಾಶಿವ ಪಡುಬಿದ್ರಿ, ರುಕ್ಕಯ್ಯ ಕರಂಬಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here