Home ಕರ್ನಾಟಕ ಜೆಡಿಎಸ್ ಪಟ್ಟಿ ಪ್ರಕಟ: ಮಂಡ್ಯದಿಂದಲೇ ಕುಮಾರಸ್ವಾಮಿ ಸ್ಪರ್ಧೆ

ಜೆಡಿಎಸ್ ಪಟ್ಟಿ ಪ್ರಕಟ: ಮಂಡ್ಯದಿಂದಲೇ ಕುಮಾರಸ್ವಾಮಿ ಸ್ಪರ್ಧೆ

21
0

ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷದಿಂದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ಜೆಡಿಎಸ್ ಪಾಲಿಗೆ ಮೂರು ಲೋಕಸಭಾ ಕ್ಷೇತ್ರಗಳು ದೊರೆತಿದ್ದು, ಮಂಡ್ಯ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಪ್ರಕಟಿಸಲಾಗಿದೆ. ಜತೆಗೆ, ಎಪ್ರಿಲ್ 4ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಸರು ಘೋಷಣೆಯಾಗಿದೆ. ಕೋಲಾರ (ಎಸ್‍ಸಿ ಮೀಸಲು) ಕ್ಷೇತ್ರಕ್ಕೆ ಕೆಜಿಎಫ್‍ನ ಮಲ್ಲೇಶ್ ಬಾಬು ಹೆಸರನ್ನು ಅಂತಿಮಗೊಳಿಸಿದ್ದಾರೆ ಈ ಸಂಬಂಧ ಜೆಡಿಎಸ್‍ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪ್ರಕಟಿಸಲಾಗಿದೆ.

LEAVE A REPLY

Please enter your comment!
Please enter your name here