Home Uncategorized ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾರೆಡ್ಡಿಗೆ ಟಿಕೆಟ್

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾರೆಡ್ಡಿಗೆ ಟಿಕೆಟ್

35
0

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಣೆ ಮಾಡಿದೆ. ​​ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯಿಂದ ಹೊರಬಂದಿದ್ದ ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಎನ್ ಆರ್ ಸಂತೋಷ್ ಗೆ ಅರಸೀಕೆರೆ ಕ್ಷೇತ್ರದ ಟಿಕೆಟ್ ನೀಡಲಾಗಿದೆ. 

#KarnatakaElections | #JDS releases the third list of 59 candidates. The party to support #Congress candidate in Najangud. It has also decided to support #CPIM and #RPI in 6 seats. #News9SouthDeskhttps://t.co/BgZNp1pUCE pic.twitter.com/gDDxET2CCc
— Mahesh Chitnis (@Mahesh_Chitnis) April 19, 2023

ಮೊದಲ ಪಟ್ಟಿಯಲ್ಲಿ ಜೆಡಿಎಸ್ 93 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ನಂತರ ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 

ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 201 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

LEAVE A REPLY

Please enter your comment!
Please enter your name here