Home Uncategorized ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ 

ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ 

21
0

ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರು:  ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ  ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.

ಇದನ್ನೂ ಓದಿ: ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!

ಇನ್ನು ಬೆಳಗಾವಿಯ ಗೊರೂರು ಮಠದ ಗುಣಾಧಾರನಂದಿ ಮಹಾರಾಜ ಸ್ವಾಮೀಜಿಗಳು ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

 ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here