Home Uncategorized ಜ.22ರಂದು ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ರಾಜ್ಯ ಸರಕಾರಕ್ಕೆ ವಿಜಯೇಂದ್ರ ಒತ್ತಾಯ

ಜ.22ರಂದು ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ರಾಜ್ಯ ಸರಕಾರಕ್ಕೆ ವಿಜಯೇಂದ್ರ ಒತ್ತಾಯ

12
0

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಇದೇ 22ರಂದು ನಡೆಯಲಿದೆ. ಆ ದಿನ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 22ರಂದು ಸರಕಾರಿ ರಜೆ ಘೋಷಿಸಲು ಮನವಿ ಮಾಡಿದರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಇರಲಿದೆ. ಜನರು ಉತ್ತರಾಭಿಮುಖವಾಗಿ 5 ದೀಪ ಬೆಳಗಿಸಲು ವಿನಂತಿಸಿದರು.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಐತಿಹಾಸಿಕ ಘಳಿಗೆಗೆ ರಾಮಭಕ್ತರಷ್ಟೇ ಅಲ್ಲ; ಇಡೀ ಜಗತ್ತಿನ ಅನೇಕ ದೇಶಗಳಲ್ಲಿ ಕೂಡ ಉತ್ಸಾಹ ಕಾಣುತ್ತಿದೆ. ರಾಮಚಂದ್ರ ಮತ್ತು ಕರ್ನಾಟಕದ ಸಂಬಂಧ ನಿನ್ನೆ ಮೊನ್ನೆಯದಲ್ಲ. ರಾಮಾಯಣ ಯುಗದಿಂದ ಈ ಸಂಬಂಧ ಇದೆ. ಸೀತಾಮಾತೆಯ ಅಪಹರಣದ ನಂತರ ರಾಮನು ಲಕ್ಷ್ಮಣನ ಜೊತೆ ಕಿಷ್ಕಿಂಧೆಗೆ (ಇಂದಿನ ಹಂಪಿ) ಪ್ರಯಾಣ ಬೆಳೆಸಿದ ಕುರುಹುಗಳಿವೆ. ಕೊಪ್ಪಳದ ಅಂಜನಾದ್ರಿ ಬೆಟ್ಟ ಹನುಮಂತನ ಜನ್ಮಭೂಮಿ ಎಂದು ವಿವರಿಸಿದರು.

ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್ ಟಾರ್ಗೆಟ್?

ಕಾಂಗ್ರೆಸ್ಸಿನ ಬಿ.ಕೆ.ಹರಿಪ್ರಸಾದ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರೂ ಹೇಳಿಕೆ ಕೊಟ್ಟಿದ್ದಾರೆ. ಆದ್ದರಿಂದ ಅಹಿತಕರ ಘಟನೆ ಆಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಲಿ ಎಂದು ಅವರು ಪ್ರಶ್ನೆಗೆ ಉತ್ತರವಾಗಿ ಒತ್ತಾಯಿಸಿದರು. ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆಯೇ ಅಥವಾ ಕೇಂದ್ರ ಸರಕಾರವೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ನುಡಿದರು.

ಕಾಂಗ್ರೆಸ್ಸಿಗರು ಎಲ್ಲೆಡೆ ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆ ಆಹ್ವಾನವನ್ನು ತಿರಸ್ಕರಿಸಿದ್ದಾರೆ.  ಅಲ್ಪಸಂಖ್ಯಾತರ ತುಷ್ಟೀಕರಣ ಮತ್ತು ರಾಮಭಕ್ತರ ಕುರಿತ ತಿರಸ್ಕಾರದ ನಡವಳಿಕೆ ಸಾಕಷ್ಟು ಟೀಕೆಗೆ ಒಳಗಾಗಿದೆ ಎಂದು ವಿವರಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಮಮಂದಿರ ದರ್ಶನ ಅಭಿಯಾನದ ಸಹ ಸಂಚಾಲಕ ಮತ್ತು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here