Home Uncategorized ಜ.28ರಂದು ಸಿಎಆರ್/ಡಿಎಆರ್ ಹುದ್ದೆಗಳಿಗೆ ಪರೀಕ್ಷೆ: ಅಭ್ಯರ್ಥಿಗಳಿಗೆ ಮಾರ್ಗಸೂಚಿ

ಜ.28ರಂದು ಸಿಎಆರ್/ಡಿಎಆರ್ ಹುದ್ದೆಗಳಿಗೆ ಪರೀಕ್ಷೆ: ಅಭ್ಯರ್ಥಿಗಳಿಗೆ ಮಾರ್ಗಸೂಚಿ

12
0

ಮಂಗಳೂರು, ಜ.24: ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್/ಡಿಎಆರ್)ಯಲ್ಲಿ ಖಾಲಿ ಇರುವ 3,064 ಹುದ್ದೆಗಳಿಗೆ (ಪುರುಷ ಮತ್ತು ತೃತೀಯ ಲಿಂಗ ಪುರುಷ) ಲಿಖಿತ ಪರೀಕ್ಷೆಯು ಜ.28ರಂದು ಪೂ.11ರಿಂದ 12:30ರವರೆಗೆ ಮೂಡುಬಿದಿರೆಯ 8 ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ 17,000 ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆ ಇದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 120 ನಿಮಿಷಗಳ ಮುಂಚೆ ಅಂದರೆ ಬೆಳಗ್ಗೆ 9ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಯಾವುದೇ ಇಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್ ಗಳು, ಬ್ಲೂಟೂತ್ ಉಪಕರಣಗಳು, ಪೇಪರ್ ತುಂಡು, ಪುಸ್ತಕಗಳು, ನೋಟ್ಗಳು ಇತ್ಯಾದಿ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಅವರವರ ಪ್ರವೇಶ ಪತ್ರದೊಂದಿಗೆ ಯಾವುದಾದರೂ ಗುರುತಿನ ಚೀಟಿ (ಉದಾ: ಚಾಲನಾ ಅನುಜ್ಞಾ ಪತ್ರ, ಪಾಸ್ ಪೋರ್ಟ್/ಆಧಾರ್ ಕಾರ್ಡ್/ಪಾನ್ ಕಾರ್ಡ್/ಓಟರ್ ಐಡಿಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುವುದು.

ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವಂತಿಲ್ಲ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here