ಉಡುಪಿ, ಜ.5: ತನು ಯೋಗ ಭೂಮಿ 100ರ ಸಂಭ್ರಮವು ಉಡುಪಿ ಸೈಂಟ್ ಸಿಸಿಲಿಸ್ ಪ್ರೌಢಶಾಲಾ ಸಭಾಂಗಣದಲ್ಲಿ ಜ.7ರಂದು ಬೆಳಗ್ಗೆ 10ಗಂಟೆಗೆ ನಡೆಯಲಿದೆ ಎಂದು ಯೋಗಪಟು ತನುಶ್ರೀ ಪಿತ್ರೋಡಿ ತಿಳಿಸಿದ್ದಾರೆ,.
ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ 87, ದ.ಕ. 12, ವಿಜಯಪುರದ 1 ವಿದ್ಯಾಸಂಸ್ಥೆಗಳಲ್ಲಿ ಈ ಸಾಧನೆ ಮಾಡಲಾಗಿದೆ. ಸುಮಾರು 40 ನಿಮಿಷಗಳ ಕಾಲ ಯೋಗ, ಯೋಗಾ ಸನದ ಬಗ್ಗೆ ಮಾಹಿತಿ, ಸಂಸ್ಕಾರ, ಸಂಸ್ಕೃತಿ, ದೇಶಭಕ್ತಿ ಸಾರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.
ಈ ಪರಿಕಲ್ಪನೆಯ ಕಾರ್ಯಕ್ರಮವನ್ನು 100 ವಿದ್ಯಾಸಂಸ್ಥೆಗಳ 30,910 ಮಂದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸಿ ದ್ದಾರೆ. ರವಿವಾರ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ಹಾಗೂ ಯೋಗ ಭೂಮಿ ಕಾರ್ಯಕ್ರಮ ನಡೆಯಲಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ರಾಜ್ಯಮಟ್ಟ ದಲ್ಲಿಯೂ ಪ್ರದರ್ಶಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತಂದೆ ಉದಯ ಕುಮಾರ್, ತಾಯಿ ಸಂಧ್ಯಾ, ತಂಗಿ ರಿತುಶ್ರೀ, ವಿಜಯ ಕೋಟ್ಯಾನ್ ಪಿತ್ರೋಡಿ ಉಪಸ್ಥಿತರಿದ್ದರು.