ಆಸ್ಟ್ರೇಲಿಯಾ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ಟೀಮ್ ಇಂಡಿಯಾದ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರನ್ನು ಶ್ಲಾಘಿಸಿದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ಯಾಟ್ ಕಮಿನ್ಸ್ ಅವರ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ, ತಾನು ಅಂದುಕೊಂಡಿದ್ದ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗದೆ ಭಾರತಕ್ಕೆ ಕೇವಲ 200 ರನ್ಗಳ ಗುರಿಯನ್ನು ನೀಡಿತ್ತು.
The post ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸಿಸ್ ನಿರ್ಧಾರದ ಬಗ್ಗೆ ಸಚಿನ್ ಅಚ್ಚರಿ appeared first on Ain Live News.
