ಹೈದರಾಬಾದ್: ನಾಲ್ವರು ಟಿಆರ್ಎಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರಿಗೆ ನೀಡಿದ್ದ ನೋಟಿಸ್ಗೆ ತೆಲಂಗಾಣ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದ್ದು ಪ್ರಕರಣದಲ್ಲಿ ಸದ್ಯ ಸಂತೋಷ್ ಅವರನ್ನು ವಿಚಾರಣೆಗೊಳಪಡಿಸಲಾಗುವುದಿಲ್ಲ. ತೆಲಂಗಾಣ ಹೈಕೋರ್ಟ್ನ ನಿರ್ದೇಶನದ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂತೋಷ್ಗೆ ಎಸ್ಐಟಿ ಎರಡನೇ ನೋಟಿಸ್ ನೀಡಿದ ನಂತರ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಅವರು ಇನ್ನೂ ತನಿಖಾ ತಂಡದ ಮುಂದೆ ಹಾಜರಾಗಬೇಕಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

 
         
        