Home Uncategorized ಟೀಚರ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

ಟೀಚರ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

45
0

ಬೆಂಗಳೂರು;- ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದರೆ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ. ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ ಆರಂಭವಾಗಲಿದೆ.

ಈ ನೇಮಕಾತಿಗೆ ನ್ಯಾಯಾಲಯ ಇನ್ನೊಂದು ತಿಂಗಳಲ್ಲಿ ಅನುಮತಿ ನೀಡಿ ಆದೇಶ ಪ್ರಕಟಿಸುವ ಸಾಧ್ಯತೆಗಳಿವೆ. 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ ಅವರು, ಒಪ್ಪಿಗೆ ದೊರೆತರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ನೇಮಕಾತಿ ಕಾರ್ಯ ಪೂರ್ಣವಾಗಲಿದೆ ಎಂದರು.

The post ಟೀಚರ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ appeared first on Ain Live News.

LEAVE A REPLY

Please enter your comment!
Please enter your name here