ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ.
ಜುಲೈ 7ರ ಮಧ್ಯರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು 60 ವರ್ಷದ ಗಜೇಂದ್ರ ವಣ್ಣೂರೆ, ಪತಿ 48 ವರ್ಷದ ದ್ರಾಕ್ಷಾಯಿಣಿ ವಣ್ಣೂರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!
ಮಧ್ಯರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ನಿನ್ನೆಯಿಂದ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಬಾಗಿಲು ಹೊಡೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ.
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯನಡೆಸಿದ್ದಾರೆ.