ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ. ಕಲಬುರಗಿ : ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.
ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಸರಿಯಾಗಿ ಡ್ಯೂಟಿ ನೀಡುತ್ತಿಲ್ಲ. ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣ ಆರೋಪಿಸಿದ್ದಾರೆ.
ಇದನ್ನೂ ಓದಿ: ಕೆಎಸ್ ಆರ್ ಟಿಸಿ ಚಾಲಕ ಆತ್ಮಹತ್ಯೆ ಯತ್ನ ಕೇಸ್: ಚಲುವರಾಯಸ್ವಾಮಿ ಪ್ರತಿಕ್ರಿಯೆ; ವರ್ಗಾವಣೆ ಆದೇಶಕ್ಕೆ ತಡೆ!
ಅಲ್ಲದೆ, ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೇಲ್ ಸುರಿದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ, ಅನಾಹುತವನ್ನು ತಡೆದಿದ್ದಾರೆ.