Home ಕರ್ನಾಟಕ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

17
0

ಉಡುಪಿ : ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್‌ಗಳಾದ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಕೋರ್ಸ್‌ ಗಳ ಪ್ರವೇಶಕ್ಕೆ ಎಸೆಸೆಲ್ಸಿ ಮತ್ತು ಪಿಯುಸಿ.(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್ -www.cipet.gov.in- ಅಥವಾ ದೂರವಾಣಿಸಂಖ್ಯೆ: 0821-2510618, 9480253024, 9791431827 ಹಾಗೂ 9466585669ನ್ನು ಸಂಪರ್ಕಿ ಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here