Home Uncategorized ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯ

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯ

38
0

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ. ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ.

ಈ ಸಂಬಂಧ ಎಐಸಿಸಿ ಮಾಜಿ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ,

ಬಹಳ ದಿನಗಳಿಂದ ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಹಿಂದಿನ ಸರಕಾರ ಹಲವು ಭರವಸೆಗಳನ್ನು ನೀಡಿದ್ದರೂ ಯಾವುದೇ ಸಕಾರಾತ್ಮಕ ಫಲಿತಾಂಶ ಬಂದಿಲ್ಲ. ಆದರೆ, ಶಿವಕುಮಾರ್ ಸ್ವಯಂಪ್ರೇರಣೆಯಿಂದ ಸಂಘವನ್ನು ಸಂಪರ್ಕಿಸಿ ಚಾಲಕರನ್ನು ಬೆಂಬಲಿಸಿದರು. ಚಾಲಕರೊಂದಿಗೆ ಹಲವು ಬಾರಿ ಸಭೆ ನಡೆಸಿ ಪರಿಹಾರದ ಭರವಸೆ ನೀಡಿದರು. ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ನಾವು ಏನನ್ನೂ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇವೆ. ಇದೀಗ ಡಿಕೆಶಿ ಅವರು ಸಿಎಂ ಆಗುವುದನ್ನು ನಿರೀಕ್ಷಿಸುತ್ತಿದ್ದೇವೆಂದು ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಹೇಳಿದರು.

LEAVE A REPLY

Please enter your comment!
Please enter your name here