Home Uncategorized ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ವಿಸ್ತೃತ ಪೀಠಕ್ಕೆ ವಿಚಾರಣೆ ವರ್ಗಾವಣೆ

ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ವಿಸ್ತೃತ ಪೀಠಕ್ಕೆ ವಿಚಾರಣೆ ವರ್ಗಾವಣೆ

9
0

ಬೆಂಗಳೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಜೊತೆಗೆ ಸಿಬಿಐ ಅರ್ಜಿ ಸಂಬಂಧ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು. ಯುದ್ಧೋಪಾದಿಯಲ್ಲಿ ಪ್ರಕರಣದ ವಿಚಾರಣೆಗೆ ವಕೀಲರ ಮನವಿ ಮಾಡಿದ್ದು, ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ಹಿಂಪಡೆದಿರುವುದನ್ನು ಪ್ರಶ್ನಿಸಲಾಗಿದೆ. ಬಹಳ ಪ್ರಮುಖವಾಗಿರುವ ಅಂಶಗಳನ್ನು ವಕೀಲರು ಪ್ರಸ್ತಾಪಿಸಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್, ಸುಪ್ರೀಂಕೋರ್ಟ್ ನ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ. ಅಡ್ವೊಕೇಟ್ ಜನರಲ್ ಸಿಬಿಐ ಹಾಗೂ ಶಾಸಕ ಯತ್ನಾಳ್ ವಾದ ವಿರೋಧಿಸಿದ್ದಾರೆ. ಸಮ್ಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಕೇಳಿದ ನಂತರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಸರಕಾರದ ಕ್ರಮ ಪ್ರಶ್ನಿಸಿ ಸಿಬಿಐ ಕೂಡ ಅರ್ಜಿ ಸಲ್ಲಿಸಿದೆ. ಸಿಬಿಐಗೆ ನೀಡಿದ ಸಮ್ಮತಿ ಹಿಂಪಡೆಯಲು ಸರಕಾರಕ್ಕೆ ಅಧಿಕಾರವಿದೆಯೇ, ಪೂರ್ವಾನ್ವಯವಾಗಿ ತನಿಖೆಗೆ ನೀಡಿದ ಸಮ್ಮತಿ ಹಿಂಪಡೆಯಬಹುದೇ ಎಂದು ಸರಕಾರಕ್ಕೆ ನ್ಯಾ.ಕೃಷ್ಣ ದೀಕ್ಷಿತ್‌ರಿದ್ದ ಪೀಠ ಪ್ರಶ್ನೆ ಮಾಡಿತ್ತು. ಸರಕಾರದ ನಿರ್ಧಾರವನ್ನು ಸಿಬಿಐ ಪ್ರಶ್ನಿಸುವಂತಿಲ್ಲ. ಸರಕಾರದ ಕ್ರಮದಿಂದ ಸಿಬಿಐ ಬಾದಿತವಾಗಿಲ್ಲವೆಂದು ವಾದ ಮಂಡಿಸಲಾಗಿದೆ.

ಹೈಕೋರ್ಟ್ ಗೆ ಸಿಬಿಐ ಅರ್ಜಿ ಸಲ್ಲಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜಕೀಯ ನಡೆಯುತ್ತಿದೆ, ನನ್ನನ್ನು ಏನೂ ಮಾಡಲು ಆಗುವುದಿಲ್ಲ. ಕೆಲವು ಅಧಿಕಾರಿಗಳು ರಾಜಕೀಯ ಮಾಡುತ್ತಿದ್ದಾರೆ. ನಾನು ನಂಬಿದ ದೇವರು, ನ್ಯಾಯ ಇದೆ. ಕಾಲ ಚಕ್ರ ತಿರುಗುತ್ತಿರುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here