Home Uncategorized ಡಿ.29ರಂದು ವಿಶ್ವ ಮಾನವ ದಿನಾಚರಣೆ

ಡಿ.29ರಂದು ವಿಶ್ವ ಮಾನವ ದಿನಾಚರಣೆ

6
0

ಉಡುಪಿ, ಡಿ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಡಿ.29ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದು, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಡಾ.ಪ್ರಜ್ಞಾ ಮಾರ್ಪಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here