ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ.
ಕೆಸಿ ಜನರಲ್ ಆಸ್ಪತ್ರೆಯ ಜನರಲ್ ವೈದ್ಯಾಧಿಕಾರಿ ಡಾ.ಲಕ್ಷ್ಮೀಪತಿ ಮಾತನಾಡಿ, ಆಸ್ಪತ್ರೆಯಲ್ಲಿ ಪ್ರತಿದಿನ ಸುಮಾರು 3-4 ರೋಗಿಗಳು ದಾಖಲಾಗುತ್ತಿದ್ದಾರೆ. ಆದರೆ, ಸದ್ಯಕ್ಕೆ ಇದು ಆತಂಕಕ್ಕೆ ಕಾರಣವಲ್ಲ. ಜ್ವರದ ಲಕ್ಷಣಗಳೊಂದಿಗೆ ಹೊರರೋಗಿ ವಿಭಾಗಕ್ಕೆ ರೋಗಿಗಳು ಬರುತ್ತಿದ್ದಾರೆ, ಮಲೇರಿಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿದಿನ 1-2 ಪ್ರಕರಣಗಳು ವರದಿಯಾಗುತ್ತವೆ ಎಂದು ಹೇಳಿದ್ದಾರೆ.
ಸರಿಯಾದ ಔಷಧಿಗಳನ್ನು ನೀಡಿದರೆ, ಹೆಚ್ಚಿನ ರೋಗಿಗಳು ಒಂದು ವಾರದ ಸಮಯದಲ್ಲಿ ಚೇತರಿಸಿಕೊಳ್ಳುತ್ತಾರೆಂದು ತಿಳಿಸಿದ್ದಾರೆ.
ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮದ (ಎನ್‌ವಿಬಿಡಿಸಿಪಿ) ಉಪನಿರ್ದೇಶಕ ಡಾ.ಶರೀಫ್ ಮಾತನಾಡಿ, ಸದ್ಯಕ್ಕೆ ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿಲ್ಲ. ರಾಜ್ಯದಲ್ಲಿ ಡೆಂಗ್ಯೂಗೆ ಸಂಬಂಧಿಸಿದಂತೆ ಒಟ್ಟು 3,828 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಏಪ್ರಿಲ್ 1 ರಿಂದ 320 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದು ಹೇಳಿದ್ದಾರೆ.
ಬೇಸಿಗೆಯಲ್ಲಿ ಭೂಮಿಯನ್ನು ತಂಪಾಗಿರಿಸಲು ನೀರನ್ನು ಹಾಕುತ್ತಾರೆ. ನೀರಿನ ಕೊರತೆ ಎದುರಾಗುವ ಹಿನ್ನೆಲೆಯಲ್ಲಿ ಹೊರಗೆ ಪಾತ್ರಗಳಲ್ಲಿ ನೀರನ್ನು ಸಂಗ್ರಹಿಸುತ್ತಾರೆ. ಕೂಲರ್ ಗಳಲ್ಲಿ ನೀರು ಬದಲಾಯಿಸದ ಕಾರಣ ಸೊಳ್ಳೆಗಳು ಇಲ್ಲಿ ಆಶ್ರಯಿಸುತ್ತೇವೆ. ಎಲ್ಲೆಲ್ಲಿ ನೀರು ತುಂಬಿರುತ್ತದೆಯೋ ಅಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಜಾಗವನ್ನು ಕಂಡು ಕೊಳ್ಳುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಇಂತಹ ಪ್ರಕರಣಗಳಲ್ಲಿ ಏರಿಕೆಗಳು ಕಂಡು ಬರುತ್ತಿವೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಸಾಮಾನ್ಯವಾಗಿ, ಮಳೆಗಾಲದಲ್ಲಿ ಪ್ರಕರಣಗಳಲ್ಲಿ ಏರಿಕೆಗಳು ಕಂಡು ಬರುತ್ತವೆ. ಆದರೆ, ಈ ಬಾರಿ ಹವಾಮಾನ ಬದಲಾವಣೆಯಿಂದಾಗಿ ವಾತಾವರಣ ತೇವಾಂಶದಿಂದ ಕೂಡಿರುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತಿವೆ ಎಂದು ತಿಳಿಸಿದ್ದಾರೆ.