Home ಕರ್ನಾಟಕ ತುಮಕೂರಿನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ

ತುಮಕೂರಿನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ

23
0

ತುಮಕೂರು: ಇಡೀ ರಾಜ್ಯದ ಗಮನ ಸೆಳೆದಿದ್ದ ಕಲ್ಪತರುನಾಡು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 1.79ಲಕ್ಷಕ್ಕು ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಸೋಲಿಸುವ ಮೂಲಕ ಕ್ಷೇತ್ರದ ಹೊರಗಿನವರು ಗೆಲ್ಲುವುದಿಲ್ಲ ಎಂಬ ಅಪವಾದವನ್ನು ಅಳಿಸಿ ಹಾಕಿದ್ದಾರೆ.

8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ರಾಜ್ಯ ಸರಕಾರದ ಇಬ್ಬರು ಪ್ರಭಾವಿ ಸಚಿವರಿದ್ದರೂ ಹೊರಗಿನವರು ಎಂದೇ ಬಿಂಬಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಗೆಲುವು ಸಾಧಿಸಿದ್ದಾರೆ.

ಎನ್.ಡಿ.ಎ ಮೈತ್ರಿಕೂಟ ಅಭ್ಯರ್ಥಿ ವಿ.ಸೋಮಣ್ಣ 705481 ಮತಗಳನ್ನು ಪಡೆದರೆ, ಕಾಂಗ್ರೆಸ್‍ನ ಎಸ್.ಪಿ.ಮುದ್ದಹನುಮೇಗೌಡ ಅವರು 5,36,160 ಮತಗಳನ್ನು ಪಡೆದಿದ್ದು,1,69311 ಮತಗಳಿಂದ ಪರಾಭವಗೊಂಡಿದ್ದಾರೆ.

LEAVE A REPLY

Please enter your comment!
Please enter your name here