Home Uncategorized ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸೋಲಿಗೆ ಹಿಂದುತ್ವದ ಅಂಶವೊಂದೇ ಕಾರಣವಲ್ಲ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸೋಲಿಗೆ ಹಿಂದುತ್ವದ ಅಂಶವೊಂದೇ ಕಾರಣವಲ್ಲ: ದಿನೇಶ್ ಗುಂಡೂರಾವ್

35
0

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಲು ಹಿಂದುತ್ವದ ಅಂಶವೊಂದೇ ಕಾರಣವಲ್ಲ. ಏಕೆಂದರೆ, ಇತರ ಜಿಲ್ಲೆಗಳಲ್ಲಿ ಪ್ರಬಲ ಹಿಂದುತ್ವದ ಅಲೆಯ ವಿರುದ್ಧ ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಹೇಳಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಲು ಹಿಂದುತ್ವದ ಅಂಶವೊಂದೇ ಕಾರಣವಲ್ಲ. ಏಕೆಂದರೆ, ಇತರ ಜಿಲ್ಲೆಗಳಲ್ಲಿ ಪ್ರಬಲ ಹಿಂದುತ್ವದ ಅಲೆಯ ವಿರುದ್ಧ ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಹೇಳಿದ್ದಾರೆ.

ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಲೋಕಸಭೆ ಚುನಾವಣೆಗೆ ಶ್ರಮಿಸುವಂತೆ ಒತ್ತಾಯಿಸಿದರು. ‘ರಾಜ್ಯದ ಪ್ರಧಾನ ಜಿಲ್ಲೆಗಳಲ್ಲಿ ಒಂದಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ’ ಎಂದರು.

‘ಮುಂದೆಯೂ ಹಿರಿಯ ಮುಖಂಡರೊಂದಿಗೆ ಚರ್ಚೆ ನಡೆಸಿ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿ, ದಕ್ಷಿಣ ಕನ್ನಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಗೂ ಮುನ್ನ ಕರಾವಳಿಯಲ್ಲಿ ಏಕೆ ಸ್ಥಾನ ಕಳೆದುಕೊಂಡಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ’ ಎಂದರು.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ದೀರ್ಘಕಾಲದ ಒಡನಾಟವಿದೆ, ಇಲ್ಲಿನ ಅಭಿವೃದ್ಧಿಗೆ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಇದೇ ವೇಳೆ ಪುತ್ತೂರು ಶಾಸಕ ಅಶೋಕ್ ರೈ ಅವರು ಪುತ್ತೂರು ತಾಲೂಕಿಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಸಚಿವರನ್ನು ಒತ್ತಾಯಿಸಿದರು. ಪಕ್ಷವು ಕ್ರಿಯಾಶೀಲವಾಗಿರಬೇಕು ಮತ್ತು ಬೂತ್ ಮಟ್ಟದಲ್ಲಿ ಯೋಜನೆಗಳನ್ನು ಪ್ರಚಾರ ಮಾಡಬೇಕು. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ತಂದಿದ್ದರೆ, ಅವರು ಪ್ರತಿ ಮನೆಗೆ ಭೇಟಿ ನೀಡಿ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ತಮ್ಮ ಕೆಲಸಗಳನ್ನು ಪ್ರಚಾರ ಮಾಡುತ್ತಿದ್ದರು. ನಮ್ಮ ಯೋಜನೆಗಳು ಪರಿಣಾಮಕಾರಿಯಾಗಿ ಜನರನ್ನು ತಲುಪುತ್ತಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here