Home Uncategorized ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ

ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ

25
0

ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಾವಣಗೆರೆ: ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಪ್ರಾಪ್ತರನ್ನು ಚಿತ್ರದುರ್ಗದ ವೀಕ್ಷಣಾ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕರು ಎಸ್.ಎಸ್.ನಗರ ಮತ್ತು ಬಾಷಾ ನಗರ ನಿವಾಸಿಗಳು. ಜುಲೈ 1 ರಂದು ಈ ಘಟನೆ ನಡೆದಿದೆ.

ಬಾಲಕರು ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿತ್ತು.

ಇದನ್ನೂ ಓದಿ: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಎರಡನೇ ವಂದೇ ಭಾರತ್ ರೈಲಿನ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 26 ರಂದು ಚಾಲನೆ ನೀಡಿದ್ದರು. 

ಈ ಘಟನೆ ಪ್ರಯಾಣಿಕರು ಹಾಗೂ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here