Home Uncategorized ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

32
0

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಮಾಜಿ ಶಾಸಕ ವೆಂಕಟಸ್ವಾಮಿ  (53) ಹೃದಯಾಘಾತದಿಂದ ನಿಧನರಾಗಿದ್ದಾರೆ. ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಮಾಜಿ ಶಾಸಕ ವೆಂಕಟಸ್ವಾಮಿ  (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು. ಮಾಜಿ ಶಾಸಕ ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.  ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದ ವೆಂಕಟಸ್ವಾಮಿ ಅವರಿಗೆ 2023ರ ಮಾರ್ಚ್ 21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಹೃದಯಾಘಾತವಾಗಿತ್ತು. ಕೂಡಲೆ ವೆಂಕಟಸ್ವಾಮಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

LEAVE A REPLY

Please enter your comment!
Please enter your name here