Home Uncategorized ದೇಶದ ಕೋವಿಡ್​​ 19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವ; ಸಭೆಯ ಮುಖ್ಯಾಂಶಗಳು

ದೇಶದ ಕೋವಿಡ್​​ 19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವ; ಸಭೆಯ ಮುಖ್ಯಾಂಶಗಳು

4
0
Advertisement
bengaluru

ದೇಶದ ಕೋವಿಡ್ -19 (Covid 19) ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಬುಧವಾರ ದೆಹಲಿಯಲ್ಲಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ. ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ನಿರ್ಧರಿಸಿದೆ.ಈ ಸಭೆಯಲ್ಲಿ ಆರೋಗ್ಯ ಮತ್ತು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ಫಾರ್ಮಸ್ಯುಟಿಕಲ್ಸ್ ಮತ್ತು ಬಯೋಟೆಕ್ನಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿರ್ದೇಶಕ ರಾಜೀವ್ ಬೇಲ್, ನೀತಿ ಆಯೋಗ (ಆರೋಗ್ಯ) ಸದಸ್ಯ ವಿ.ಕೆ ಪೌಲ್ ಮತ್ತು ನ್ಯಾಷನಲ್ ಟೆಕ್ನಿಕಲ್ ಅಡ್ವಸರಿ ಗ್ರೂಪ್ ಆನ್ ಇಮ್ಯುನೈಜೇಷನ್ (NTAGI) ಅಧ್ಯಕ್ಷ ಎನ್.ಎಲ್ ಆರೋರಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

Delhi | Union Health Minister Mansukh Mandaviya chairs a meeting with health officials over the #COVID19 situation pic.twitter.com/qrD4EyczUO

— ANI (@ANI) December 21, 2022

ಪ್ರಸ್ತುತ ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ. ಜಿನೋಮ್ ಸೀಕ್ವೆನ್ಸಿಂಗ್​ ಪ್ರಮಾಣವು ಹೆಚ್ಚಾದರೆ ಮಾತ್ರ ದೇಶದಲ್ಲಿ ಹರಡುತ್ತಿರುವ ಹೊಸ ರೂಪಾಂತರಿಗಳನ್ನು ಪತ್ತೆ ಮಾಡಲು ಹಾಗೂ ಸಮುದಾಯ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಕೊವಿಡ್ ತಪಾಸಣೆಯನ್ನು ಹೆಚ್ಚಿಸಬೇಕು. ಪಾಸಿಟಿವ್ ಬಂದ ಎಲ್ಲ ಮಾದರಿಗಳನ್ನೂ ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಇನ್​ಸಾಕಾಗ್ ಪ್ರಯೋಗಾಲಯಗಳಿಗೆ (lGSLs – INSACOG Genome Sequencing Laboratories) ಕಡ್ಡಾಯವಾಗಿ ಕಳುಹಿಸಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚೀನಾ ಸೇರಿದಂತೆ ವಿಶ್ವದ ಇತರ ದೇಶಗಳ ಕೊವಿಡ್ ಸೋಂಕು ಪ್ರಕರಣಗಳ ಅಂಕಿಅಂಶ ಮತ್ತು ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರವು ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಈ ಸಮಿತಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿದ್ದು, ಭಾರತದ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕಣ್ಗಾವಲು ಇರಿಸಲು, ತುರ್ತು ನಿರ್ಧಾರ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

bengaluru bengaluru

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)


bengaluru

LEAVE A REPLY

Please enter your comment!
Please enter your name here