Home Uncategorized ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿಗೆ ಇಬ್ಬರ ಸಾವು, ತಲಾ 25 ಲಕ್ಷ ರೂ. ಪರಿಹಾರ ಘೋಷಣೆ...

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿಗೆ ಇಬ್ಬರ ಸಾವು, ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಬಿಬಿಎಂಪಿ

28
0

ದೊಡ್ಡಬಳ್ಳಾಪುರ : ಬಿಬಿಎಂಪಿ(BBMP) ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೃತರ ಕುಟುಂಬಗಳಿಗೆ ಬಿಬಿಎಂಪಿ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ಮಹೇಶ್ ಮತ್ತು ಮಾರುತಿ ಕುಟುಂಬಗಳಿಗೆ ಬಿಬಿಎಂಪಿ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ನಿನ್ನೆ ಬೆಂಗಳೂರು ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್​ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ನೆಲಮಂಗಲ ಮೂಲದ ಮಹೇಶ್, ಮಾರುತಿ ಮೃತಪಟ್ಟಿದ್ದರು. ಘಟನೆ ಖಂಡಿಸಿ ಹುಲಿಕುಂಟೆ ಗ್ರಾಮಸ್ಥರು ರಸ್ತೆ ತಡೆದು ಧರಣಿ ನಡೆಸಿದ್ದರು. ಮೃತದೇಹಗಳನ್ನ‌ ಅಪಘಾತ ಸ್ಥಳದಿಂದ ತೆರವು ಮಾಡಲು ಬಿಡದೆ ಧರಣಿ ನಡೆಸಲಾಗಿತ್ತು. ಹೀಗಾಗಿ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿ ಎರಡೂ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟ ಇಬ್ಬರಿಗೂ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿ ಧರಣಿ ನಿರತರ ಮನವೊಲಿಸಿ ಧರಣಿ ಅಂತ್ಯ ಮಾಡಿಸಿದ್ದಾರೆ. ಬಳಿಕ ಮೃತ ದೇಹಗಳು ದೊಡ್ಡಬಳ್ಳಾಪುರ ಶವಾಗಾರಕ್ಕೆ‌ ರವಾನಿಸಲಾಗಿದೆ.

ಇದನ್ನೂ ಓದಿ: Accident: ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ

ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಹೆಚ್.ಡಿ.ಕೋಟೆ ಕೃಷ್ಣಾಪುರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಥಮ ಪಿಯುಸಿ ಓದುತ್ತಿದ್ದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ಆಕಾಶ್ ಎಚ್.ಡಿ.ಕೋಟೆ ತಾಲ್ಲೂಕು ಮಾರನ ಹಾಡಿ ನಿವಾಸಿ. ಬೆಡ್ ಶಿಟ್ ನಿಂದ ನೇಣು ಬಿಗಿದುಕೊಂಡಿದ್ದಾನೆ. ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here