Home Uncategorized ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ...

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ

12
0

ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ಬೆಂಗಳೂರು: ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಇನ್ನು ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ, ಕೊಡಗು ಜಿಲ್ಲೆಗೆ ಮೂರನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ ಒಂಬತ್ತನೇ ಸ್ಥಾನ, ಬೆಂಗಳೂರು ಉತ್ತರ ಜಿಲ್ಲೆಗೆ ಹನ್ನೊಂದನೆ ಸ್ಥಾನ ಸಿಕ್ಕಿದೆ. ಒಟ್ಟು 524,409 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಅಂತಿಮ ಸ್ಥಾನ

ವಿದ್ಯಾರ್ಥಿ ಪ್ರಕಾರಗಳಲ್ಲಿ, ಸಾಮಾನ್ಯ ವಿದ್ಯಾರ್ಥಿಗಳು 607,489 ವಿದ್ಯಾರ್ಥಿಗಳೊಂದಿಗೆ ಅತ್ಯಧಿಕ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದಾರೆ, ಅದರಲ್ಲಿ 479,746 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಇದರ ಪರಿಣಾಮವಾಗಿ ಶೇಕಡಾ 78.97 ರಷ್ಟು ಸಾಮಾನ್ಯ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಸುಮಾರು 8 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಇದೀಗ ಪ್ರಕಟವಾಗಿದೆ. ಪಿಯುಸಿ ದ್ವಿತೀಯ ಪರೀಕ್ಷೆಯನ್ನು ಜೂನ್ 18 ರಂದು ಘೋಷಿಸಲಾಗಿತ್ತು, ಒಟ್ಟು 2.44 ಲಕ್ಷ (2,44,129) ವಿದ್ಯಾರ್ಥಿಗಳು ವಿಜ್ಞಾನ ವಿಭಾಗಕ್ಕೆ, 2,34,815 ವಿದ್ಯಾರ್ಥಿಗಳು ಕಲಾ ವಿಭಾಗ, ವಾಣಿಜ್ಯ ವಿಭಾಗದಲ್ಲಿ 2,47,269 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇ.72.53, ಕಲಾ- ಶೇ.48.17, ವಾಣಿಜ್ಯ- ಶೇ.64.97 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ

ವಿದ್ಯಾರ್ಥಿಗಳು ಉತ್ತೀರ್ಣರ ಶೇಕಡಾವಾರು, ಮೆರಿಟ್ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು- karresults.nic.in, pue.karnataka.gov.in.
 

LEAVE A REPLY

Please enter your comment!
Please enter your name here