Home Uncategorized ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರು

ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರು

31
0

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನದಂದು ನಡೆದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಯಲ್ಲಿ 18,231 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 5,25,787 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 5,07,556 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಾಜರಾತಿಯು ಶೇ.96.53ರಷ್ಟು ದಾಖಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 1499 ವಿದ್ಯಾರ್ಥಿಗಳು ಗೈರಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 1,175, ಕಲಬುರಗಿ ಜಿಲ್ಲೆಯಲ್ಲಿ 1,132, ರಾಯಚೂರು 1,097, ತುಮಕೂರು 1,067 ಮತ್ತು ಬೀದರ್ ಜಿಲ್ಲೆಯಲ್ಲಿ 1,010 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಮಾ.1ರಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆಯು ಆರಂಭವಾಗಿದ್ದು, ಪರೀಕ್ಷೆಗೆ ರಾಜ್ಯಾದ್ಯಂತ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ 3,30,608 ಗಂಡು ಮಕ್ಕಳು ಮತ್ತು 3,67,958 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 6,98,566 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಿದೆ. 540 ಜಿಲ್ಲಾ ಜಾಗೃತ ದಳ ಹಾಗೂ 3,108 ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here