ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು: ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮೃತರನ್ನು ಕಾರ್ತಿಕ್ ಜೈನ್, ಆದರ್ಶ್ ಕುಮಾರ್ ಎಂದು ಗುರುತಿಸಲಾಗಿದೆ. ಐವರು ವಿದ್ಯಾರ್ಥಿಗಳು ಶನಿವಾರ ತಡರಾತ್ರಿ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಆದರೆ ಈಗ ಬೇಡ ಬೆಳಗ್ಗೆ ಹೋಗೋಣ ಎಂದು ವಾಪಸ್ ಬರುವಾಗ ಹುಣಸಮಾರನಹಳ್ಳಿ ಬಳಿ ಚಾಲಕ ನಿದ್ದೆ ಮಂಪರಿನಲ್ಲಿ ಡಿವೈಡರ್ ಡಿಕ್ಕಿ ಹೊಡೆದಿದ್ದಾನೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಐವರು ಸಾವು, ಮೂವರಿಗೆ ಗಾಯ
ಇದರಿಂದ ಕಾರ್ತಿಕ್ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆದರ್ಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.