Home Uncategorized ನಗರದಲ್ಲಿ ಪಾದಚಾರಿಗಳ ಚಲನಶೀಲತೆಗೆ ಹೆಚ್ಚಿನ ಆದ್ಯತೆ ನೀಡಬೇಕು: ತಜ್ಞರು

ನಗರದಲ್ಲಿ ಪಾದಚಾರಿಗಳ ಚಲನಶೀಲತೆಗೆ ಹೆಚ್ಚಿನ ಆದ್ಯತೆ ನೀಡಬೇಕು: ತಜ್ಞರು

30
0

ನಾಗರಿಕರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಗರದ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಪಾದಚಾರಿ ಚಲನಶೀಲತೆಗೆ ಆದ್ಯತೆ ನೀಡುವತ್ತ ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದು ಸಂಚಾರ ಅಧಿಕಾರಿಗಳು ಮತ್ತು ಸಾರಿಗೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರು: ನಾಗರಿಕರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಗರದ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಪಾದಚಾರಿ ಚಲನಶೀಲತೆಗೆ ಆದ್ಯತೆ ನೀಡುವತ್ತ ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದು ಸಂಚಾರ ಅಧಿಕಾರಿಗಳು ಮತ್ತು ಸಾರಿಗೆ ತಜ್ಞರು ಸಲಹೆ ನೀಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜನವರಿ 11 ರಿಂದ 17 ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಘೋಷಿಸಿದ್ದು, ಈ ನಿಟ್ಟಿನಲ್ಲಿ ಜನರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಇನ್ನೂ ಬಹಳ ದೂರ ಸಾಗಬೇಕಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್ ಡಿಸಿಪಿ (ಪೂರ್ವ) ಕಲಾಕೃಷ್ಣ ಸ್ವಾಮಿ ಅವರು ಮಾತನಾಡಿ, ಜನರು ರಸ್ತೆ ದಾಟುವಾಗಲೇ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ರಸ್ತೆ ದಾಟುವಾಗ ಜನರು ಜಾಗರೂಕರಾಗಿರಬೇಕು ಮತ್ತು ಜೀಬ್ರಾ ಕ್ರಾಸಿಂಗ್‌ಗಳಲ್ಲಿ ಮಾತ್ರ ರಸ್ತೆಗಳನ್ನು ದಾಟಬೇಕು. ಪ್ರಸ್ತುತ ಭಾರೀ ವಾಹನಗಳಿಗೆ ಪ್ರತ್ಯೇಕ ಲೇನ್‌ಗಳಿಲ್ಲದ ಕಾರಣ, ಅಪಘಾತಗಳ ಸಾಧ್ಯತೆಯನ್ನು ಕಡಿಮೆ ಮಾಡಲು ಚಾಲಕರು ಒಂದೇ ಲೇನ್‌ನಲ್ಲಿ ಚಾಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ

ಉತ್ತಮ ಟ್ರಾಫಿಕ್ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರಸ್ತೆಗಳು ಮತ್ತು ಫುಟ್‌ಪಾತ್‌ಗಳಿಗೆ ಗುಣಮಟ್ಟದ ಮೂಲಸೌಕರ್ಯದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು ಮಾತನಾಡಿ, ರಸ್ತೆಗಳ ಗುಣಮಟ್ಟ ಹೆಚ್ಚಿಸಲು ಕ್ರಮಕೈಗೊಳ್ಳುತ್ತಿದೆ. ರಸ್ತೆ ಗುಂಡಿಗಳ ತುಂಬಲು ಐದು ಗುತ್ತಿಗೆದಾರರನ್ನು ನಿಯೋಜಿಸಲಾಗಿದೆ ಮತ್ತು ನಗರದಾದ್ಯಂತ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಜನಾಗ್ರಹ ಸಂಸ್ಥಾಪಕ ಶ್ರೀನಿವಾಸ ಅಲವಿಲ್ಲಿ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿರುವ ನಗರಗಳಲ್ಲಿ ಬೆಂಗಳೂರು ಕೂಡ ಒಂದಾಗಿದೆ. ಪಾದಚಾರಿಗಳ ಅಪಘಾತ ಪ್ರಕರಣಗಳು ಹೆಚ್ಚಾಗಿದ್ದು, ಅಧಿಕಾರಿಗಳು ಪಾದಚಾರಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here