ಬೆಂಗಳೂರು:
ರಾಜ್ಯದ ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ತೆರವುಗೊಳಿಸಿದೆ.
ಇದರಿಂದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾದಂತಾಗಿದೆ.
59 ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿ ಮಾಡಿ ಅ.8ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ರೋಸ್ಟರ್ ಪಾಲಿಸಿಲ್ಲ ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಪರಿಗಣಿಸಿದ್ದ ಏಕಸದಸ್ಯ ಪೀಠ ಮೀಸಲು ಅಧಿಸೂಚನೆಗೆ ಅ.15ರಂದು ತಡೆಯಾಜ್ಞೆ ನೀಡಿತ್ತು.