ನವದೆಹಲಿ: ಈ ಹಿಂದೆ ಮಾಜಿ ಪ್ರಧಾನಿ ದೇವೆಗೌಡ ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಈಗ ನೀರಾವರಿ ಯೋಜಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ವಿವರವಾಗಿ ವಿವರಿಸಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ (Deve Gowda) ಹೇಳಿದ್ದಾರೆ.
ನವದೆಹಲಿಯಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಮ್ಮ ರಾಜ್ಯದ ನೀರಾವರಿ ವಿಚಾರದಲ್ಲಿ ಪ್ರಸ್ತಾಪ ಮಾಡಿದ್ದೇನೆ. ಕಾವೇರಿ ,ಕೃಷ್ಣಾ ಮಹಾದಾಯಿ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ರಾಜ್ಯದ ಯೋಜನೆಗಳಿಗೆ ಆಗಿರುವ ಅನ್ಯಾಯ ವಿವರಿಸಿದ್ದೇನೆ ಎಂದು ಹೇಳಿದರು.
ಈ ಜಾಗದಲ್ಲಿ ಕೂತು ತೀರ್ಮಾನ ಮಾಡೊದು ಹಿಂಸೆಯಾಗಿದೆ ದೇವೇಗೌಡರೇ. ನದಿ ನೀರಿನ ವ್ಯಾಜ್ಯಗಳ ತೀರ್ಮಾನ ಕಷ್ಟವಾಗಿದೆ. ನಮ್ಮದೆ ಸರಕಾರ ಇದ್ದರೂ ನರ್ಮದಾ ತೀರ್ಮಾನ ಕಷ್ಟವಾಗಿದೆ. ನಮ್ಮವರೆ ನಮಗೆ ವಿರೋಧ ಮಾಡುತ್ತಿದ್ದಾರೆ. ಎಲ್ಲಾ ನದಿಗಳದ್ದು ವಿವಾದಗಳಿವೆ. ಯಾವ ನಿರ್ಧಾರ ತೆಗೆದುಕೊಳ್ಳುವುದು..? ಎಂದು ನನ್ನ ಬಳಿ ಪ್ರಧಾನಿ ಮೋದಿ ಅಳಲು ತೋಡಿಕೊಂಡರು ಎಂದು ದೇವೇಗೌಡ ತಿಳಿಸಿದ್ದಾರೆ.
ಕುಂಚಿಟಿಗ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ
ಕುಂಚಿಟಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಕುಂಚಿಟಿಗ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ. ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕು. ಕುಂಚಿಟಿಗ ಸಮಯದಾಯ 6, 7 ತಾಲೂಕುಗಳಲ್ಲಿದೆ. ಸಮುದಾಯಕ್ಕೆ ಅನ್ಯಾಯ ಆಗಿರುವ ಬಗ್ಗೆ ವಿವರವಾಗಿ ಹೇಳಿದ್ದೇನೆ ಎಂದು ತಿಳಿಸಿದರು.
ಹಾಸನ ಏರ್ಪೋರ್ಟ್ ವಿಚಾರವನ್ನು ಪ್ರಸ್ತಾಪ ಮಾಡಿದ್ದೇನೆ. ಏರ್ಪೋರ್ಟ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಡ್ಡಗಾಲು ಹಾಕುತ್ತಿದ್ದರು. ಏನೇ ಆದರೂ ಏರ್ ಪೋರ್ಟ್ ಕೆಲಸ ಮಾಡಲಿಲ್ಲ. ನೀವೆ ತೀರ್ಮಾನ ಮಾಡಿ ಎಂದು ಮೋದಿಯವರಿಗೆ ಹೇಳಿದ್ದೇನೆ ಎಂದು ಮಾತನಾಡಿದರು.
ಬಿಜೆಪಿ, ಕಾಂಗ್ರೆಸ್ನವರು 150 ಗೆಲುತ್ತೇವೆ ಅಂತಾ ಹೇಳುತ್ತಿದ್ದಾರೆ. ನಾವು ಅಷ್ಟೊಂದು ಸ್ಥಾನಗಳನ್ನು ಗೆಲ್ಲುತ್ತೇವೆ ಅಂತಾ ಹೇಳೋಕೆ ಆಗಲ್ಲ. JDS 123 ಸ್ಥಾನ ಗೆಲ್ಲುವ ಗುರಿ ಅಂತಾ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ನಿಂದ ಹೋಗಿದ್ದ ಕೆಲವರು ವಾಪಸ್ ಪಕ್ಷಕ್ಕೆ ಬರುತ್ತಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
