Home Uncategorized ನನ್ನ ಮಗ ಧರಿಸಿದ್ದ ಹುಲಿ ಉಗುರು ಮಾದರಿ ಪೆಂಟೆಂಟ್ ನೈಜವಲ್ಲ – ಹೆಚ್ ಡಿಕೆ

ನನ್ನ ಮಗ ಧರಿಸಿದ್ದ ಹುಲಿ ಉಗುರು ಮಾದರಿ ಪೆಂಟೆಂಟ್ ನೈಜವಲ್ಲ – ಹೆಚ್ ಡಿಕೆ

36
0

ಬೆಂಗಳೂರು;– ನನ್ನ ಮಗ ಧರಿಸಿದ್ದ ಹುಲಿ ಉಗುರು ಮಾದರಿ ಪೆಂಟೆಂಟ್ ನೈಜವಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಧರಿಸಿದ್ದರೆನ್ನಲಾದ ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದರು.

ಇವತ್ತು ಬೆಳಗ್ಗಿನಿಂದ ಚಿತ್ರನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ. ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ ನದ್ದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ತಿಳಿಸಿದರು.

The post ನನ್ನ ಮಗ ಧರಿಸಿದ್ದ ಹುಲಿ ಉಗುರು ಮಾದರಿ ಪೆಂಟೆಂಟ್ ನೈಜವಲ್ಲ – ಹೆಚ್ ಡಿಕೆ appeared first on Ain Live News.

LEAVE A REPLY

Please enter your comment!
Please enter your name here