ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ರೈತರ ಹಿತ ಮುಖ್ಯ, ರಾಜ್ಯದ ಜನತೆಯ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು: ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ರೈತರ ಹಿತ ಮುಖ್ಯ, ರಾಜ್ಯದ ಜನತೆಯ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಬಂದ್ ಮಾಡಬಾರದು ಎಂದು ನಾವು ಹೇಳುವುದಿಲ್ಲ, ನಾವು ಅಡ್ಡಿಪಡಿಸಲು ಹೋಗುವುದಿಲ್ಲ, ಆದರೆ ಸಾರ್ವಜನಿಕರಿಗೆ ತೊಂದರೆ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಮಾಡಬೇಡಿ ಎಂದು ಕೇಳಿಕೊಂಡರು.
ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಪ್ರಧಾನಿಗೆ ದೇವೇಗೌಡರ ಪತ್ರ: ಮಾಜಿ ಪಿಎಂ ನಡೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ಮಾತುಕತೆ ಮೂಲಕ ಬಗೆಹರಿಸಬೇಕು ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ರಾಜ್ಯದಲ್ಲಿ ಬಿಜೆಪಿಯಲ್ಲಿರುವ 25 ಸಂಸದರು ಕೇಂದ್ರ ಸರ್ಕಾರದ ಮುಂದೆ, ಪ್ರಧಾನಿಯವರ ಮುಂದೆ ಒತ್ತಡ ಹಾಕಬೇಕೆಂದು ನಾವು ಕೇಳಿಕೊಳ್ಳುತ್ತೇವೆ. ಪ್ರಧಾನ ಮಂತ್ರಿಗಳು ಮಧ್ಯೆ ಪ್ರವೇಶಿಸಬೇಕು ಎಂದು ಸಿಎಂ ಒತ್ತಾಯಿಸಿದರು.
ಬಿಜೆಪಿಯವರು ಚಡ್ಡಿ ಹಾಕಿಕೊಂಡು ಪ್ರತಿಭಟನೆ, ಮೆರವಣಿಗೆ ಮಾಡುವ ಬದಲು ಪ್ರಧಾನಿ ಮೇಲೆ ಒತ್ತಡ ಹಾಕಿ ಮಾತುಕತೆ ಮೂಲಕ ಕರ್ನಾಟಕ-ತಮಿಳು ನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಒತ್ತಡ ಹೇರಬೇಕೆಂದು ಕೇಳಿಕೊಂಡರು.
