‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿ ಹಳಿತಪ್ಪಿದ್ದ ರಸ್ತೆ ರೈಲು ವಾಹನ (ಆರ್‌ಆರ್‌ವಿ)ವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ತೆರವು ಮಾಡಲಾಗಿದೆ. ಬೆಂಗಳೂರು: ‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿ ಹಳಿತಪ್ಪಿದ್ದ ರಸ್ತೆ ರೈಲು ವಾಹನ (ಆರ್‌ಆರ್‌ವಿ)ವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ತೆರವು ಮಾಡಲಾಗಿದೆ.
ಆ ಮೂಲಕ ಬೆಳಗ್ಗೆಯಿಂದ ಹಸಿರು ಮಾರ್ಗದಲ್ಲಿ ಸ್ಥಗಿತವಾಗಿದ್ದ ಮೆಟ್ರೋ ರೈಲು ಸಂಚಾರ ಮಧ್ಯಾಹ್ನ 3.40ರಿಂದ ಪುನಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Namma Metro Alert. Train services on Green line will be available between Nagasandra – Yeshwanthpur and Mantri Square-Sampige Road to Silk Institute Metrostations due to a technical snag at RajajinagarMetro Station. Inconvenience caused is regretted.#nammametro #NammaBengaluru pic.twitter.com/c3D4uBzDGA
— Ashik_Mulki (@AshikMulki) October 3, 2023
ಇದನ್ನೂ ಓದಿ: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಹಳಿತಪ್ಪಿದ ರೀ ರೈಲ್: ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಮ್ಮ ಮೆಟ್ರೋ ಇಎ-ಪಿಪಿಆರ್ ಶ್ರೀವಾಸ್ ರಾಜಗೋಪಾಲನ್ ಅವರು, ಇಂದು ಗ್ರೀನ್ ಲೈನ್‌ನಲ್ಲಿ ಮೆಟ್ರೋ ಸೇವೆಗಳ ಅಡಚಣೆಯ ಕುರಿತು ಮಾಧ್ಯಮ ಬಿಡುಗಡೆಯಾಗಿದೆ. ವಿವರಗಳು ಮಾಧ್ಯಮ ಪ್ರಕಟಣೆಯಲ್ಲಿವೆ. 15.40 ಗಂಟೆಯಿಂದ ಸಹಜ ಸ್ಥಿತಿಗೆ ಮರಳಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mission Accomplished
The derailed re-rail was shifted using a hydraulic crane. The service will start after checking the safety of the Current Metro Route. #nammametro @MDNammaMetro pic.twitter.com/Vi5NTACul6
— Ashik_Mulki (@AshikMulki) October 3, 2023
ಇಂದು ಬೆಳಗ್ಗೆ ಹಳಿ ದುರಸ್ತಿಗೆ ತೆರಳುತ್ತಿದ್ದ ವೇಳೆ, ಆರ್ ಆರ್ ವಿ ವಾಹನವು ಹಳಿ ತಪ್ಪಿತ್ತು. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿತ್ತು. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಮ್ಮ ಮೆಟ್ರೊ ಪ್ರಯಾಣಿಕರು ಪರದಾಡಿದ್ದರು. ಯಶವಂತಪುರದಿಂದ ಮಂತ್ರಿ ಸ್ಕ್ವೇರ್ ವರೆಗೆ ಒಂದು ಮಾರ್ಗದಲ್ಲಿ ಮಾತ್ರ ಅರ್ಧ ಗಂಟೆಗೆ ಒಮ್ಮೆ ಮೆಟ್ರೊ ಸಂಚಾರವಿತ್ತು.
ಇದನ್ನೂ ಓದಿ: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸಬೇಕು: ಸಂಸದ ತೇಜಸ್ವಿ ಸೂರ್ಯ ಒತ್ತಾಯ
ಇದರಿಂದ ನಿಗದಿತ ಸಮಯಕ್ಕೆ ಪ್ರಯಾಣಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದರು. ಯಶವಂತಪುರ ರೈಲ್ವೆ ನಿಲ್ದಾಣ ಸಮೀಪದಿಂದ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿತ್ತು. ಮೆಟ್ರೊ ರೈಲು ಮಾರ್ಗದಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಈ ವಾಹನ ಬಳಸಲಾಗುತ್ತದೆ. ಸೋಮವಾರ ಮಧ್ಯರಾತ್ರಿ ರಾಜಾಜಿನಗರದ ಸಮೀಪ ಸಂಚರಿಸುತ್ತಿದ್ದಾಗ ಈ ವಾಹನ ಹಳಿತಪ್ಪಿ ಸಮಸ್ಯೆ ಉಂಟಾಗಿತ್ತು.