ಬೆಂಗಳೂರು: ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಮ್.ಮಹೇಶ್ವರ ರಾವ್ ಅವರನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಝ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.