ಪ್ರತೀ ಜಿಲ್ಲೆಯಲ್ಲಿ ಕಾರ್ಯಕಾರಿಣೆ ಸಭೆ ನಡೆಸಲು ತೀರ್ಮಾನ
ಬೆಂಗಳೂರು:
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ನವೆಂಬರ್ 5ರಂದು ಮಂಗಳೂರಿ ನಲ್ಲಿ ನಡೆಸಲು ಬಿಜೆಪಿ ರಾಜ್ಯನಾಯಕರು ನಿರ್ಧಾರ ಕೈಗೊಂಡಿದ್ದಾರೆ.ಕಾರ್ಯಕಾರಿಣಿ ಸಭೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಮುಂಬರುವ ಗ್ರಾಮ ಪಂಚಾಯಿತಿ,ಲೋಕಸಭಾ ಉಪಚುನಾವಣೆ,ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು,ಉಪಾಧ್ಯಕ್ಷರ ಆಯ್ಕೆ,ವಿಧಾನ ಪರಿಷತ್,ಹಾಗೂ ಉಪ ಚುನಾವಣೆಗಳ ವರದಿಗಳು ಸಭೆಯಲ್ಲಿ ಚೆರ್ಚೆಗೆ ಬರಲಿವೆ ಎನ್ನಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ಕಟೀಲು ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು,ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ,ರಾಜ್ಯ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಎರಡು ದಶಕಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಸಾಗುತ್ತಿದ್ದು ಜಿಲ್ಲೆಯ ಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ತುಂಬಲಿದೆ.ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು,ಪ್ರತಿ ಜಿಲ್ಲೆಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಲು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಈ ಕಾರ್ಯ ಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದೆ.ರಾಜ್ಯದಲ್ಲಿ ಪಕ್ಷದ ಸಂಘಟನೆ,ಚಟುವಟಿಕೆ ಗಳನ್ನು ಇನ್ನಷ್ಟು ಭದ್ರಪಡಿಸುವ ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಮಹತ್ವದ ಕಾರ್ಯಕಾರಿಣಿ ಸಭೆ ನಡೆಸಲು ಉದ್ದೇಶಿಸಲಾಗಿದೆ.