Home Uncategorized ನಾಲ್ಕು ತಿದ್ದುಪಡಿ ಮಸೂದೆಗಳು ವಿಧಾನಸಭೆಯಲ್ಲಿ ಮಂಡನೆ

ನಾಲ್ಕು ತಿದ್ದುಪಡಿ ಮಸೂದೆಗಳು ವಿಧಾನಸಭೆಯಲ್ಲಿ ಮಂಡನೆ

33
0

ನೌಕರರ ಸಾಮಾನ್ಯ ಕೇಡರ್ ನ್ನು ರೂಪಿಸಲು ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸೊಸೈಟಿ (ತಿದ್ದುಪಡಿ) ಮಸೂದೆ, 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.  ಬೆಂಗಳೂರು: ನೌಕರರ ಸಾಮಾನ್ಯ ಕೇಡರ್ ನ್ನು ರೂಪಿಸಲು ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸೊಸೈಟಿ (ತಿದ್ದುಪಡಿ) ಮಸೂದೆ, 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. 

ಪ್ರಾಥಮಿಕ ಕೃಷಿ ಸೊಸೈಟಿಗಳಲ್ಲಿ ಅಕ್ರಮಗಳನ್ನು ನಿಯಂತ್ರಿಸುವ ಹಾಗೂ ಆಡಳಿತ ಮಂಡಳಿಯ ಒತ್ತಡದಿಂದ ಮುಕ್ತವಾಗಿ ಕಾರ್ಯನಿರ್ವಹಿಸುವುದಕ್ಕೆ ಈ ತಿದ್ದುಪಡಿ ಮಸೂದೆ ಅನುವು ಮಾಡಿಕೊಡಲಿದೆ.

ಪ್ರಾಥಮಿಕ ಕೃಷಿ ಸಹಕಾರ ಸೊಸೈಟಿಗಳಲ್ಲಿ ಹಣದ ಅಕ್ರಮಗಳ ಪ್ರಕರಣಗಳನ್ನು ತಡೆಗಟ್ಟಲು ಸಾಮಾನ್ಯ ಕೇಡರ್ ರಚನೆ ಅಗತ್ಯವಿದೆ ಎಂದು ಮಸೂದೆಯ ಉದ್ದೇಶಗಳಲ್ಲಿ ಹೇಳಲಾಗಿದೆ.

ಪ್ರಸ್ತಾವಿತ ತಿದ್ದುಪಡಿಯು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ಕಾರ್ಯದರ್ಶಿಗಳಿಗೆ ರೈತರಿಗೆ ಮತ್ತು ಹಾಲು ಉತ್ಪಾದಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಸರ್ಕಾರ ಕೋಡ್ ಆಫ್ ಸಿವಿಲ್ ಪ್ರೊಸೀಜರ್ (ತಿದ್ದುಪಡಿ) ಮಸೂದೆಯನ್ನು ಮಂಡಿಸಿದ್ದು, ಇದು,  ನ್ಯಾಯಾಲಯಗಳಲ್ಲಿ ಸುದೀರ್ಘ ವ್ಯಾಜ್ಯಗಳನ್ನು ಎದುರಿಸಲು ಸಾಧ್ಯವಿಲ್ಲದ ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಸಹಾಯ ಮಾಡಲು, ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗಲಿದೆ. 

ಇನ್ನು ಮಂಗಳವಾರ ಕೆಳಮನೆಯಲ್ಲಿ ಮಂಡಿಸಲಾದ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ, 2023, ಸ್ವಯಂ ಘೋಷಣೆಯ ಮೂಲಕ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿದೆ.

ಸರ್ಕಾರ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ನೋಂದಣಿ ಅಧಿಕಾರಿಯು ನಕಲಿ ದಾಖಲೆಗಳು ಮತ್ತು ಕಾನೂನಿನಿಂದ ನಿಷೇಧಿಸಲಾದ ಇತರ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಲು ಅನುವು ಮಾಡಿಕೊಡುತ್ತದೆ.

LEAVE A REPLY

Please enter your comment!
Please enter your name here