ಬೆಂಗಳೂರು: ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಮೀಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್(ಬಿಎಂಟಿಎಫ್)ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿದೆ
ಅಲ್ಲದೆ, ಗೃಹ ರಕ್ಷಕರು ಮತ್ತು ಪದನಿಮಿತ್ತ ಸಿವಿಲ್ ಡಿಫೆನ್ಸ್‌ನ ಹೆಚ್ಚುವರಿ ನಿರ್ದೇಶಕ ಹರಿಶೇಖರನ್. ಪಿ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ಹಾಗೂ ಡಿಐಜಿ ಆಗಿದ್ದ ಲಾಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ಡಿಐಜಿ ಮತ್ತು ಬೆಳಗಾವಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.