Home ಕರ್ನಾಟಕ ನಾಳೆ(ಮಾ.18) ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ

ನಾಳೆ(ಮಾ.18) ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ

34
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ಮಾ.18) ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ  ಮಾತನಾಡಲಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಸ್ಥಳೀಯ ಬಿಜೆಪಿ ಮುಖಂಡರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here