Karnataka: Distribution of millet malt to school children from tomorrow | ನಾಳೆಯಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ನಾಳೆಯಿಂದ (ಫೆ.22 ) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಫೆ. 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ” ಎಂದು ಹೇಳಿದರು.
