Home Uncategorized ನಾಳೆ ಬಂದ್ ಹಿನ್ನೆಲೆ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ, ಕಾನೂನು ವಿವಿ...

ನಾಳೆ ಬಂದ್ ಹಿನ್ನೆಲೆ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ, ಕಾನೂನು ವಿವಿ ಪರೀಕ್ಷೆಗಳೂ ಮುಂದೂಡಿಕೆ

41
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.

ಇದನ್ನೂ ಓದಿ: ಕಾವೇರಿ ಕಿಚ್ಚು: ನಾಳೆ ಬೆಂಗಳೂರು ಬಂದ್; ಶಾಲಾ ಕಾಲೇಜ್ ಗಳಿಗೆ ರಜೆ, ಬಿಎಂಟಿಸಿ ಡೌಟ್, ಮೆಟ್ರೋ ಇರುತ್ತೆ

ಸೆ.26, 28, 29 ರಂದು ನಡೆಯಬೇಕಿದ್ದ  ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಂದೂಡಿದೆ. ಕುಲಸಚಿವ ಕೆಬಿ ಪ್ರವೀಣ್ ಪರೀಕ್ಷೆಗಳನ್ನು ಮುಂದೂಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿ: ನಾಳಿನ ಬೆಂಗಳೂರು ಬಂದ್ ಯಶಸ್ಸಿಗೆ ಬಿಜೆಪಿ ಬೆಂಬಲ- ಯಡಿಯೂರಪ್ಪ

ಸೆ.26, 28, 29 ರಂದು ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ ಪರೀಕ್ಷೆಗಳು ನಡೆಯಬೇಕಿತ್ತು.

ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

LEAVE A REPLY

Please enter your comment!
Please enter your name here