ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿದೇಶ ಪ್ರವಾಸದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿದೇಶ ಪ್ರವಾಸದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಇಸ್ರೋಗೆ ಭೇಟಿ ನೀಡಿದ ಬಳಿಕ ರೋಡ್ ಶೋ ನಡೆಸಲಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಅಧಿಕೃತವಾಗಿ ಮೋದಿ ಅವರ ರೋಡ್ ಶೋ ಇರಲ್ಲ. ಕೆಲ ಸ್ಥಳಗಳಲ್ಲಿ ಜನರು ಜಮಾಯಿಸುವ ಸಾಧ್ಯತೆ ನಮಗೆ ಬಗ್ಗೆ ಮಾಹಿತಿ ಇದೆ ಎಂದಿದ್ದಾರೆ.
ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ಅವರ ರೋಡ್ ಶೋ ಇರಲ್ಲ ಎಂದು ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ನಾಳೆ ಬೆಳಗಿನ ಜಾವವೇ ಬೆಂಗಳೂರಿಗೆ ಆಗಮಿಸಲಿದ್ದು, ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ. ಎಚ್ಎಎಲ್‌ನಿಂದ ಪೀಣ್ಯದ ಇಸ್ರೋ ಕಚೇರಿವರೆಗೂ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ.
ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ನೀಡಲು ಕೇಸರಿ ಪಡೆ ಸಿದ್ಧವಾಗಿದೆ.