Home Uncategorized ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ನಿಧನ

ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಂ ನಿಧನ

31
0

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ, ನಟ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಂ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ(ಬುಧವಾರ) ಕೆ. ಶಿವರಾಂ ಅವರು ಹೃದಯಾಘಾತದಿಂದ  ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಕುಟುಂಬದವರು ಸ್ಪಷ್ಟಪಡಿಸಿದ್ದರು.

ಐಎಎಸ್ ಅಧಿಕಾರಿಯಾಗಿದ್ದ ಅವರು, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದರು. ಅವರ ವೃತ್ತಿ ಜೀವನದಲ್ಲಿ, ವಿಜಯಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರು.

ʼಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಅವರು, ಬಳಿಕ ʼವಸಂತ ಕಾವ್ಯʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here