Home Uncategorized ನೂತನ ಶಾಸಕ ಪ್ರದೀಪ್‌ ಈಶ್ವರ್‌ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ

ನೂತನ ಶಾಸಕ ಪ್ರದೀಪ್‌ ಈಶ್ವರ್‌ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ

88
0

ಮಾಜಿ ಸಚಿವ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರು: ಮಾಜಿ ಸಚಿವ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಪ್ರದೀಪ್‌ ಸಾಕು ತಾಯಿ ರತ್ನಮ್ಮ ಅವರು ಚಿಕ್ಕಬಳ್ಳಾಪುರದ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಪ್ರಮಾಣ ವಚನ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಪ್ರದೀಪ್‌ ಅವರು ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದು, ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್​ ಅವರನ್ನು ಸೋಲಿಸಿ ಪ್ರದೀಪ್‌ ಈಶ್ವರ್‌ ಶಾಸಕರಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ.

LEAVE A REPLY

Please enter your comment!
Please enter your name here